ಮಂಗಳೂರು : ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡಲು ಶಾಸಕ ಭರತ್ ಶೆಟ್ಟಿ ಅವರ ಪ್ರಸ್ತಾಪ ಸಲ್ಲಿಸಿದ್ದರು. ಈ ನಡುವೆ ಮುಸ್ಲಿಂ ಐಕ್ಯತಾ ವೇದಿಕೆ ಕೋಟಿ ಚೆನ್ನಯ್ಯ ಹೆಸರಿಡಲು ಮಂಗಳೂರು ಮಹಾನಗರ ಪಾಲಿಕೆಗೆ ಮನವಿ ಮಾಡಿದೆ.
BREAKING NEWS : ರಾಜಸ್ಥಾನ ಹಿರಿಯ ಕಾಂಗ್ರೆಸ್ ನಾಯಕ ‘ಭನ್ವರ್ ಲಾಲ್ ಶರ್ಮಾ’ ನಿಧನ| MLA Bhanwar Lal Sharma dies
ಮಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡಲು ಶಾಸಕ ಭರತ್ ಶೆಟ್ಟಿ ಅವರ ಪ್ರಸ್ತಾಪ ಸಲ್ಲಿಸಿದ್ದರು. ಈ ನಡುವೆ ಮುಸ್ಲಿಂ ಐಕ್ಯತಾ ವೇದಿಕೆಯ ಮನವಿ ಪತ್ರ ಬಂದ ಹಿನ್ನೆಲೆ ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆ ಪಡೆಯಲು ಪಾಲಿಕೆ ಮುಂದಾಗಿದೆ.
ಸುರತ್ಕಲ್ ವೃತ್ತಕ್ಕೆ ಕೋಟಿ ಚೆನ್ನಯ್ಯ ಹೆಸರಿಡಲು ಮುಸ್ಲಿಂ ಐಕ್ಯತಾ ವೇದಿಕೆ ಪಾಲಿಕೆ ಕಮಿಷನರ್ ಮತ್ತು ಮೇಯರ್ ಗೆ ಮನವಿ ಸಲ್ಲಿಸಿದ್ದು ತುಳುನಾಡಿನ ದೈವಿಕ ಶಕ್ತಿಗಳಾದ ಕೋಟಿ ಚೆನ್ನಯರ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಕೋಟಿ ಚೆನ್ನಯ್ಯರ ಹೆಸರಿನ ಜೊತೆ ನವ ಮಂಗಳೂರು ನಿರ್ಮಾತೃ ಶ್ರೀನಿವಾಸ ಮಲ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಎಂ.ಲೋಕಯ್ಯ ಶೆಟ್ಟಿ ಅವರ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ.