ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಇಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ.
BIGG NEWS : `ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ : ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ದಸರಾ ಜಂಬೂಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಜನರು ಕಾತದಿಂದ ಕಾಯುತ್ತಿದ್ದಾರೆ.
ಇಂದು ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪೂಜೆ ಸಲ್ಲಿಸಿ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. 750ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವರು. ಮೈಸೂರು ಅರಮನೆಯಿಂದ ಆರಂಭಗೊಳ್ಳುವಂತ ದಸರಾ ಜಂಬೂಸವಾರಿಯ ಮೆರವಣಿಗೆ 5.07ರಿಂದ 5.18ರವರೆಗೆ ಸಾಗಲಿದೆ. ಮೈಸೂರು ಅರಮನೆಯಿಂದ ಆರಂಭಗೊಂಡು, ಕೆ ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್ ಎಂ ಸಿ, ತಿಲಕ್ ನಗರ ಮಾರ್ಗವಾಗಿ ಸಾಗಿ, ಬನ್ನಿ ಮಂಟಪ ತಲುಪಿ, ಅಲ್ಲಿಂದ ಮೈಸೂರು ಅರಮನೆಗೆ ಮರಳಲಿದೆ.
ನಂದಿಧ್ವಜ, ವೀರಗಾಸೆ, ನಾದಸ್ವರ, ನೌಪತ್, ನಿಸಾನೆ ಆನೆಗಳು, ಎನ್’ಸಿಸಿ, ಸ್ಕೌಟ್ಸ್, ಗೈಡ್ಸ್, ವಿವಿಧ ಪೊಲೀಸ್ ತುಕಡಿಗಳು, ನಾಡಿನ ಕಲೆ, ಸಂಸ್ಕೃತಿಯನ್ನು ಪ್ರತಿಂಬಿಸುವ 47 ಸ್ತಬ್ಧ ಚಿತ್ರಗಳು, 50 ಜನಪದ ಕಲಾತಂಡಗಳು ಸೇರಿದಂತೆ 100 ಕ್ಕೂ ಹೆಚ್ಚು ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ.