ಬಾಗಲಕೋಟೆ : ದಮ್, ತಾಕತ್ ಇದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಚುಣಾವಣೆಯಲ್ಲಿ ಬಾದಾಮಿಯಲ್ಲಿ ಸ್ಪರ್ಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸವಾಲು ಹಾಕಿದ್ದಾರೆ.
Big Breaking News : ಭಾರತದಲ್ಲಿ ಟು ಫಿಂಗರ್ ಟೆಸ್ಟ್ ನಿಷೇಧ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ದಮ್, ತಾಕತ್ ಇದ್ರೆ ಬಾದಾಮಿಯಲ್ಲಿ ಸ್ಪರ್ಧಿಸಲಿ, ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಲಿ ನೋಡೋಣ. ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಕ್ಷೇತ್ರದ ಭಯ ಶುರುವಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿದ್ದವರು. ಕಾಂಗ್ರೆಸ್ ಬೆಂಗಾವಲಾಗಿದ್ದರೂ ಕಾಂಗ್ರಸ್ ಪಕ್ಷವನ್ನು ಗೆಲ್ಲಿಸಲಾಗಲಿಲ್ಲ. ಈ ಬಾರಿ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುವ ಸ್ಥಿತಿಯಲ್ಲಿ ಸಿದ್ದರಾಮಯ್ಯ ಇಲ್ಲ. ಸಿದ್ದರಾಮಯ್ಯಗೆ ಕ್ಷೇತ್ರ ಹುಡುಕುವ ಸ್ಥಿತಿ ಬಂದಿದೆ.ಸಿದ್ದರಾಮಣ್ಣ, ರಾಹುಲ್ ಹೋದ ಕಡೆಯಲ್ಲ ಕಾಂಗ್ರೆಸ್ ಗೆ ಸೋಲು ಖಚಿತ ಎಂದರು.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಸಮುದಾಯ ಆರೋಗ್ಯ ಅಧಿಕಾರಿಗಳ ಭರ್ತಿಗೆ ಅರ್ಜಿ ಆಹ್ವಾನ