ಬೆಂಗಳೂರು : ರಾಜ್ಯ ಸರ್ಕಾರದ ಜಾಹೀರಾತಿಯಲ್ಲಿ ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರು ಅವರ ಫೋಟೋ ಮಿಸ್ಸಿಂಗ್ ವಿಚಾರದ ಕುರಿತಂತೆ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಜೈಲು ವಾಸ ಅನುಭವಿಸಿದ್ರು.ದೇಶದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಇದು ಆರ್ಎಸ್ಎಸ್ನ ಹಿಡನ್ ಅಜೆಂಡಾ ಅಂತ ಗೊತ್ತಾಗಿದೆ. ದೇಶದ ಮೊದಲ ಪ್ರಧಾನಿ ನೆಹರುಗೆ ಅವಮಾನ ಮಾಡಲಾಗಿದೆ. ಇದು ನೆಹರುಗೆ ಮಾತ್ರ ಅಲ್ಲ ದೇಶಕ್ಕೆ ಮಾಡಿದ ಅವಮಾನ ಎಂದು ಕಿಡಿಕಾರಿದ್ದಾರೆ.
ಸಿಎಂ ಬೊಮ್ಮಾಯಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ರಾ? ಈಶ್ವರಪ್ಪ, ರವಿಕುಮಾರ್ ಭಾಗಿಯಾಗಿದ್ರಾ? ಇವರೇನಾದ್ರೂ ದೇಶದ ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ರಾ ಎಂದು ಪ್ರಶ್ನಿಸಿದರು. ಇವರಿಗೆ ಇತಿಹಾಸ ಗೊತ್ತಿಲ್ಲ, ತಿರುಚುವುದು ಮಾತ್ರ ಗೊತ್ತು ವಾಗ್ದಾಳಿ ನಡೆಸಿದ್ದಾರೆ.