ಮಂಗಳೂರು : ರಾಜ್ಯದಲ್ಲಿ ಬರುವ ಡಿಸೆಂಬರ್ ತಿಂಗಳೊಳಗೆ ಪದವಿಪೂರ್ವ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮ ಅಂತಿಗೊಳಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
‘ಮಿಸ್ ಇಂಡಿಯಾ 2022’ ಕಿರೀಟ ಮುಡಿಗೇರಿಸಿಕೊಂಡ ‘ಕರ್ನಾಟಕದ ಸಿನಿ ಶೆಟ್ಟಿ’ | Miss India 2022
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯದ ಪದವಿಪೂರ್ವ ತರಗತಿಗಳಿಗೆ ಪಠ್ಯಕ್ರಮವನ್ನು ಡಿಸೆಂಬರ್ ಅಂತ್ಯದೊಳಗೆ ಅಂತಿಮಗೊಳಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.
ಇನ್ನು 1 ರಿಂದ 12 ನೇ ತರಗತಿವರೆಗಿನ ಪಠ್ಯಕ್ರಮವನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರಲಾಗುತ್ತದೆ. ಪಿಯುಸಿ ತರಗತಿಗಳಿಗೆ ಹೊಸ ಶಿಕ್ಷಣ ನೀತಿಯಡಿ ಪಠ್ಯಕ್ರಮ ಅಳವಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.