ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಹೊಸ ವರ್ಷದ ದಿನ ಘೋರ ದುರಂತವೊಂದು ಸಂಭವಿಸಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾಗಿ ಘಟನೆ ನಡೆದಿದೆ.
BIG NEWS : ಲಕ್ನೋದಲ್ಲಿ ಭಾರೀ ಚಳಿ ಗಾಳಿ : ಶಾಲಾ ಸಮಯ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಬದಲಾವಣೆ
ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಿನ್ನೆ ಸಂಜೆ ಮೂವರು ಯುವಕರು ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ರಾಣೇಬೆನ್ನೂರ ನಗರ ನಿವಾಸಿಗಳಾದ ನವೀನ ಕೂರಗುಂದ( 20), ವಿಕಾಶ ಪಾಟೀಲ್ (20), ಪ್ರಮೋದ (25) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಆಗಮಿಸಿದ್ದು, ತುಂಗಭದ್ರಾ ನದಿಯಲ್ಲಿ ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,