ನವದೆಹಲಿ : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದು, ಈ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ʼವಾಟ್ಸಾಪ್ ನಂಬರ್ʼಗಳು ಮಾರಾಟಕ್ಕೆ? ನಿಮ್ಮ ಮೊಬೈಲ್ ಸಂಖ್ಯೆ ಇದೆಯಾ ಪರಿಶೀಲಿಸಿ | WhatsApp Update
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದೆ. ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಿದ್ದರಾಮಯ್ಯ ಈ ಬಗ್ಗೆ ರಾಜಕೀಯ ಹೇಳಿಕೆ ನೀಡಿದ್ದಾರೆ.
ಕೆಸಿಆರ್ ಟಿಸಿ ಬಸ್ ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ್ದ ಸಿಎಂ, ಮಹಾರಾಷ್ಟ್ರ ಗೃಹ ಇಲಾಖೆ ಜೊತೆಗೆ ನಮ್ಮ ಅಧಿಕಾರಿಗಳು ಚರ್ಚಿಸಿದ್ದಾರೆ. ಕರ್ನಾಟಕದ ಜೊತೆಗೆ ಸೇರಲು ಜತ್ ತಾಲೂಕಿನ 42 ಹಳ್ಳಿಗಳ ಒಲವು ತೋರಿವೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸೇರಲು ಕೆಲ ನಿಯಮಗಳಿವೆ. ಎಲ್ಲವನ್ನೂ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.