ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ ಎಂದು ವಸತಿ ಸಚಿವ ವಿ.ಸೋಮಣ್ಣ (Minister V. Somanna) ಹೇಳಿದ್ದಾರೆ.
BIGG NEWS : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ : ಸಚಿವ ಡಾ.ಕೆ. ಸುಧಾಕರ್ ಹೇಳಿದ್ದೇನು?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲೇ ಮುಂದಿನ ಚುಣಾವಣೆ ಎದುರಿಸುತ್ತೇವೆ. ಬೊಮ್ಮಾಯಿ ಅವರು ಸಿಎಂ ಆಗಿ 6 ತಿಂಗಳು ಪೂರೈಸಿದ್ದಾರೆ. ಅವರ ನೇತೃತ್ವದಲ್ಲಿ ಮಾಡಿದ ಕೆಲಸಗಳನ್ನು ಹೇಳುತ್ತೇವೆ ಎಂದರು.
ಕೊರೊನಾ ನಿಯಂತ್ರಣ ನಮ್ಮ ಮೊದಲ ಆದ್ಯತೆಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಕೊರೊನಾ ಸಮಯದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಕೆಲಸದ ಮೇಲೆ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದರು.