ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದು, ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರೀಂ ಕೊರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರೀಂ ಕೊರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.
— Basavaraj S Bommai (@BSBommai) December 9, 2022
ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವ ಶ್ರೀ @AmitShah ಅವರನ್ನು ಭೇಟಿ ಮಾಡಲು ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ.
— Basavaraj S Bommai (@BSBommai) December 9, 2022