ಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ಅವರಿಗೆ ಮಸಾಲ್ ದೋಸೆ ಪಾರ್ಸೆಲ್ ಕಳುಹಿಸಿದ್ದಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕರಿಗೆ ತೇಜಸ್ವಿ ಸೂರ್ಯ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಕಾಂಗ್ರೆಸ್ ನವರು ನನ್ನ ಮನೆಗೆ ಮಸಾಲೆ ದೋಸೆ ಪಾರ್ಸೆಲ್ ಕಳುಹಿಸಿದ್ದಾರೆ ಎಂದು ಘೋಷಿಸಿ 24 ಗಂಟೆಗಳಿಗಿಂತ ಹೆಚ್ಚು ಸಮಯವಾಗಿದೆ. ನಾನು ಅದನ್ನು ಇನ್ನೂ ಸ್ವೀಕರಿಸಿಲ್ಲ. ಇಲ್ಲೂ ಮೋಸ ಮಾಡಿದ್ದಾರೆ. ಅವರಿಗೆ ಸರಿಯಾಗಿ ದೋಸೆ ಕೊಡಲು ಸಾಧ್ಯವಿಲ್ಲ. ಹೀಗಿದ್ದರೂ ಅವರು ಉತ್ತಮ ಆಡಳಿತ ನೀಡುವ ಕನಸು ಕಾಣುತ್ತಾರೆ ಎಂದು ಹೇಳಿದ್ದಾರೆ.
Congress held a presser yesterday and announced they have sent Masala Dosa parcel to my house.
It’s been more than 24 hours & I still haven’t received it.
They have scammed here as well.
They can’t deliver a dosa properly and they dream of delivering good governance! pic.twitter.com/Uwa08SH34B
— Tejasvi Surya (@Tejasvi_Surya) September 11, 2022
ಬೆಂಗಳೂರಿನಲ್ಲಿ ಮಳೆ ಹಾನಿಯಿಂದ ಜನರ ಪರದಾಡುತ್ತಿದ್ದರೆ ಸಂಸದರು ಹೋಟೆಲ್ನಲ್ಲಿ ದೋಸೆ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಅಂತ ವೀಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ ವಿರೋಧ ಪಕ್ಷಗಳು ಸಂಸದರ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದವು.