ದಾವಣಗೆರೆ : ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ವರ್ಗದ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
BIGG NEWS: ಮಂಡ್ಯದಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆದ್ದರೆ ಇಂಡಿಯಾ ಗೆದ್ದಂತೆ; ಸಚಿವ ಕೆ.ಸಿ.ನಾರಾಯಣಗೌಡ ಸ್ಪಷ್ಟನೆ
ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರಿಗೆ (ಕಾಫಿ,ಟೀ ಹಾಗೂ ರಬ್ಬರ್ ಬೆಳೆಗಳನ್ನು ಹೊರತುಪಡಿಸಿ) ಹನಿ ನೀರಾವರಿ ಅಳವಡಿಸಿದ ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದ ವರೆಗೆ ಸಹಾಯಧನವನ್ನು ನೀಡಲಾಗುವುದು. ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ನೀಡಲಾಗುವುದು. ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿದ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳಿಗೆ ಮೊದಲ 2 ಹೆಕ್ಟೇರ್ ಪ್ರದೇಶದವರೆಗೆ ಶೇ.90% ರಷ್ಟು ಮತ್ತು ಇತರೇ ವರ್ಗದ ರೈತ ಫಲಾನುಭವಿಗಳಿಗೆ ಮೊದಲ 2 ಹೇಕ್ಟೇರ್ ಪ್ರದೇಶದವರೆಗೆ ಶೇ.75% ರಷ್ಟು ಸಹಾಯಧನ ಲಭ್ಯವಿರುತ್ತದೆ.
BIG NEWS : ಭಾರತದಲ್ಲಿ 5G ಯುಗ ಪ್ರಾರಂಭ: 1GB ಫೈಲ್ ಈಗ ಮೂರು ಸೆಕೆಂಡುಗಳಲ್ಲೇ ಡೌನ್ಲೋಡ್ | 5G Launched In India
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ರೈತ ಫಲಾನುಭವಿಗಳಿಗೆ 2 ಹೆಕ್ಟೇರ್ ಮೇಲ್ಪಟ್ಟು 3 ಹೆಕ್ಟೇರ್ಗೆ (ಒಟ್ಟು ಗರಿಷ್ಟ 5 ಹೆಕ್ಟೇರ್) ಶೇ.45% ರಷ್ಟು ಸಹಾಯಧನ ನೀಡಲು ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ನಿಗದಿ ಪಡಿಸಿರುವ ಆರ್ಥಿಕ ಗುರಿಯ ಅನುಸಾರ ಆಯಾ ವರ್ಗದ ರೈತರ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಹೆಚ್ಚಿನ ವಿವರ ಹಾಗೂ ಇಲಾಖೆಯಿಂದ ಅನುಮೋದಿತ ಕಂಪನಿಗಳ ಮಾಹಿತಿಯನ್ನು ಆಯಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಈ ಕಛೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.