ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ( Karnataka Government Employees ) ಬಡ್ತಿ, ಮುಂಬಡ್ತಿ ಸೇರಿದಂತೆ ವಿವಿಧ ಪ್ರಯೋಜನಕ್ಕಾಗಿ ಇಲಾಖಾ ಪರೀಕ್ಷೆಗಳನ್ನು ತೇರ್ಗಡೆ ಮಾಡುವುದು ಕಡ್ಡಾಯವಾಗಿದೆ. 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಲೋಕಾಸೇವಾ ಆಯೋಗದಿಂದ ( Karnataka Public Service Commission – KPSC ) 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.ಇಲಾಖಾ ಪರೀಕ್ಷೆಗಳನ್ನು ದಿನಾಂಕ 19-05-2023ರಿಂದ 01-06-2023ರವರೆಗೆ ನಿಗದಿ ಪಡಿಸಲಾಗಿದೆ.
ಇನ್ನೂ ಆನ್ ಲೈನ್ ಮಾದರಿಯ ಕಂಪ್ಯೂಟರ್ ಬೇಸ್ಡ್ ಟೆಸ್ಟ್ ಅನ್ನು ದಿನಾಂಕ 09-06-2023 ರಿಂದ ದಿನಾಂಕ 11-06-2023ರಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂಬುದಾಗಿ ತಿಳಿಸಿದೆ.
ಆನ್ ಲೈನ್ ಮಾದರಿಯಲ್ಲಿ ವಿವರಣಾತ್ಮಕ ಪರೀಕ್ಷೆಯನ್ನು ದಿನಾಂಕ 17-06-2023ರಿಂದ 21-06-2023ರವರೆಗೆ ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ನಡೆಸಲಾಗುತ್ತದೆ ಎಂಬುದಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಮಾಹಿತಿ ನೀಡಿದೆ.
ಹೀಗಿದೆ ಇಲಾಖಾ ಪರೀಕ್ಷೆ ಹಾಗೂ ಸಿಬಿಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ