ನವದೆಹಲಿ : ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದಕ್ಕಾಗಿ ದೊಡ್ಡಬಳ್ಳಾಪುರದಲ್ಲಿ ಜುಲೈ 28 ಕ್ಕೆ ‘ಜನೋತ್ಸವ’ ಹಮ್ಮಿಕೊಳ್ಳಲಾಗಿದೆ.
ಲೋಕಸಭೆ ಕಲಾಪಕ್ಕೆ ಅಡ್ಡಿ: ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ ನಾಲ್ವರು ಕಾಂಗ್ರೆಸ್ ಸಂಸದರು ಅಮಾನತು
ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಜುಲೈ 28 ಕ್ಕೆ ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ಹಾಗೂ ಬಿಜೆಪಿಯ ಮೂರು ವರ್ಷಗಳ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಒಂದು ವರ್ಷದ ಸಾಧನಾ ಸಮಾವೇಶ ಜನೋತ್ಸವ ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು 2021ರ ಜುಲೈ 28ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ದೊಡ್ಡಮಟ್ಟದ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.