ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡದ ಯುವತಿ ಬಸ್ನಿಂದ ಕೆಳಗೆ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿದೆ. ಹೀಗಾಗಿ ಪೋಷಕರು ತಮ್ಮ ಮಗಳ ಅಂಗಾಗ ದಾನಕ್ಕೆ ಮುಂದಾಗಿದ್ದಾರೆ.
ಗಮನಿಸಿ : ವಸತಿ ರಹಿತ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ವಿಸ್ತರಣೆ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯದ ರಕ್ಷಿತಾ ಎಂಬ ಯುವತಿ. ಚಿಕ್ಕಮಗಳೂರು ನಗರದ ಬಸವನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದ ಯುವತಿ, ಮನೆಗೆ ಹಿಂದಿರುವಾಗ ಬಸ್ಸಿನಿಂದ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಗಾಯಗೊಂಡಿದ್ದ ರಕ್ಷಿತಾಳನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ರು. ಆದರೆ ರಕ್ಷಿತಾಳ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದರಿಂದ ಬದಕಿಸಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಕ್ಷಿತಾಳ ಬೇರೆಲ್ಲಾ ಅಂಗಾಂಗಗಳಿಗೆ ಯಾವುದೇ ತೊಂದರೆಯಾಗದ ಹಿನ್ನೆಲೆಯಲ್ಲಿ ಅವುಗಳ ದಾನಕ್ಕೆ ಮುಂದಾಗಬಹುದು ಎಂದು ವೈದ್ಯರು ರಕ್ಷಿತ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.
BIGG NEWS : ರಾಜ್ಯದ ಪೌರ ಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : 43 ಸಾವಿರ ಕಾರ್ಮಿಕರ ಖಾಯಂ
ರಕ್ಷಿತಾಳ ಪೋಷಕರಾದ ಲಕ್ಷ್ಮಿ ಬಾಯಿ, ಶೇಖರ್ ನಾಯ್ಕ್ ಮಗಳ ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ ಎರಡು ಕಣ್ಣುಗಳು, ಹೃದಯ, ಎರಡು ಕಿಡ್ನಿಗಳು, ಎರಡು ಶ್ವಾಸಕೋಶಗಳು ಸೇರಿ ಒಟ್ಟು ಒಂಭತ್ತು ಮಂದಿಗೆ ರಕ್ಷಿತಾಳ ಅಂಗಾಂಗಗಳನ್ನ ಜೋಡಿಸಲು ತೀರ್ಮಾನಿಸಲಾಗಿದೆ.