ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ರಾಜ್ಯ ಚಿಂತನೆ ನಡೆಸಿದೆ.
Breaking news: ಬಹುಭಾಷಾ ನಟ ʻಪ್ರತಾಪ್ ಪೋಥೆನ್ʼ ಚೆನ್ನೈನ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆ
ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕುರಿತಂತೆ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿನಲ್ಲಾದರೂ ಮಾಸ್ಕ್ ಕಡ್ಡಾಯಗೊಳಿಸಬೇಕು. ನರ ನಿರ್ಲಕ್ಷ್ಯದಿಂದ ಪರಿಸ್ಥಿತಿ ಕೈ ಮೀರುವ ಮೊದಲು ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.
ಕೋವಿಡ್ ಲಾಕ್ಡೌನ್ ಸಮಯದಲ್ಲಿ ಸರ್ಕಾರವು ಪರಿಣಾಮಕಾರಿಯಾಗಿ ಮಾಸ್ಕ್ಗಳನ್ನು ಕಡ್ಡಾಯಗೊಳಿಸಿತ್ತು. ಈಗ ಸೋಂಕಿತರಿಗೆ ರೋಗಲಕ್ಷಣಗಳು ಗಂಭೀರವಾಗಿಲ್ಲ. ಹೆಚ್ಚಿನ ಸಾವುಗಳು ದಾಖಲಾಗುತ್ತಿಲ್ಲ ಆದರೆ ಜನರು ಸಣ್ಣ ಜ್ವರವೆಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದಾಗಿ ಮುಂದೊಂದು ದಿನ ಇದ್ದಕ್ಕಿದ್ದಂತೆ ಕೊವಿಡ್ ಕೇಸುಗಳು ಹೆಚ್ಚಾದ ಮೇಲೆ ತಲೆಮೇಲೆ ಕೈಹೊತ್ತು ಕೂರುವ ಬದಲು ಈಗಲೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
BIGG NEWS : ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ರಸ್ತೆ : ಶೃಂಗೇರಿ-ಆಗುಂಬೆ ವಾಹನಗಳ ಸಂಚಾರ ಬಂದ್