ದಾವಣಗೆರೆ : ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದು, ರಾಜೀನಾಮೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಪಕ್ಷದ ಕಾರ್ಯಕರ್ತರಲ್ಲಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಾರ್ಯಕರ್ತರೆ ಪಕ್ಷದ ಶಕ್ತಿ” ನಾನು ಕಾರ್ಯಕರ್ತರಲ್ಲಿ ಅತ್ಯಂತ ವಿನಯದಿಂದ ಮನವಿ ಮಾಡುತ್ತೇನೆ.  ರಾಜೀನಾಮೆಯನ್ನು ವಾಪಸ್ ಪಡೆಯಬೇಕು, ನಾವು ನಿಮ್ಮೊಂದಿಗಿದ್ದೇವೆ ಎಂದು ಮನವಿ ಮಾಡುತ್ತೇನೆ ಎಂದುಹೇಳಿದ್ದಾರೆ.

ಸಂಘಪರಿವಾರದವರು, ಮುಖಂಡರು ರಾಜೀನಾಮೆ ಕೊಡಬಾರದೆಂದು ಹೇಳಿದ್ದಾರೆ. ಯಾರು ಸಮಾಜಘಾತುಕ ಶಕ್ತಿಗಳಿದ್ದಾರೋ ಅವರಿಗೆ ಉತ್ತರಪ್ರದೇಶದ ಮಾದರಿಯಲ್ಲಿ ಕ್ರಮ ಜರುಗಿಸಲಾಗುವುದು. ಸಮಾಜಘಾತುಕ  ಶಕ್ತಿಗಳನ್ನು ಎನ್ಕೌಂಟರ್ ಮಾಡುವುದರ ಜೊತೆಗೆ ಅವರ ಕುಟುಂಬದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಇದ್ದಾಗ ಮೂವತ್ತಕ್ಕೂ ಹೆಚ್ಚು ಹಿಂದುಗಳ ಹತ್ಯೆಯಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಸಿಎಂ ಕಣ್ಣೀರು ಹಾಕುತ್ತಿದ್ದಾರೆ. ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದಾಗ ನೀವು ಸರ್ಕಾರದ ಒಂದು ಭಾಗ ನೀವು ನಮ್ಮ ಜೊತೆ ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದಿದ್ದಾರೆ.

ಎಬಿವಿಪಿ ಯುವಕರು, ಹಿಂದೂ ಸಂಘಟನೆಗಳು, ಪಕ್ಷದ ಕಾರ್ಯಕರ್ತರಲ್ಲಿ ಕಳಕಳಿಯ ಮನವಿ ಮಾಡುತ್ತೇನೆ. ಪ್ರವೀಣ್ ಹತ್ಯೆ ಮಾಡಿದವರಿಗೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪ್ರವೀಣ್ ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಿದ್ದಾರೆ.  ಕಳೆದ ಮೂರ್ನಾಲ್ಕು ದಿನದಿಂದ ಮುಖ್ಯಮಂತ್ರಿಗಳು ನೋವಿನಲ್ಲಿದ್ದಾರೆ. ಯಾರೂಕೂಡ ಆತ್ಮಸ್ಥೈರ್ಯ ಕಳೆದುಕೊಳ್ಳಭೇಡಿ ಎಂದು ಮನವಿ ಮಾಡಿದ್ದಾರೆ.

Share.
Exit mobile version