ಬಳ್ಳಾರಿ : ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬಹುದು.
ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್ಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ. ಆದಕಾರಣ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ಇ-ಕೆವೈಸಿ ಮಾಡಸದಿರುವ ರೈತರಿಗೆ ಮುಂದಿನ 13ನೇ ಕಂತಿನ ಅನುದಾನ ವರ್ಗಾವಣೆಯಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೆÉೀರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೆÉೀರಿಯನ್ನು ಸಂಪರ್ಕಿಸಬಹುದಾಗಿದೆ.
Watch Video: ಹೊಸ ವರ್ಷದ ‘ಮೊದಲ ಸೂರ್ಯೋದಯ’ ಹೇಗಿತ್ತು ಗೊತ್ತಾ.? ಇಲ್ಲಿದೆ ವೀಡಿಯೋ ನೋಡಿ