ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 10 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಯನ್ನು ಪ್ರಧಾನಿ ಮೋದಿ ಅವರು ನವೆಂಬರ್ 10 ರಂದು ನೇರವೇರಿಸಿ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಅಕ್ಟೋಬರ್ 10 ರಂದು ಜನ ಸಂಕಲ್ಪ ಯಾತ್ರೆ ಆರಂಭಿಸಲಾಗುತ್ತದೆ. 30 ರಂದು ಕಲಬುರಗಿಯಲ್ಲಿ ಒಬಿಸಿ ಸಮಾವೇಶ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.