ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶ ನೀಡಿದ ಬೆನ್ನಲ್ಲೇ ನಾಳೆ ಮೊದಲ ಕಂತಿನಲ್ಲಿ 75,000 ನೌಕರರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ.
ಅಕ್ಟೋಬರ್ 22 ರ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಕಂತಿನಲ್ಲಿ 75,000 ನೌಕರರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ. ಜೊತೆಗೆ ರೋಜಗಾರ್ ಮೇಳಕ್ಕೂ ಅವರು ಚಾಲನೆ ನೀಡಲಿದ್ದಾರೆ.
ವಿವಿಧ ಸಚಿವಾಲಯಗಳಿಗೆ ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಸೂಚನೆ ನೀಡಿದ್ದರು. ಸದ್ದಿಲ್ಲದೆ ಅದು ಕಾರ್ಯರೂಪಕ್ಕೆ ಬಂದಿದ್ದು, 75,000 ನೌಕರರನ್ನು ನೇಮಕ ಪ್ರಕ್ರಿಯೆಯನ್ನು ಇಲಾಖೆಗಳು ಪೂರ್ಣಗೊಳಿಸಿವೆ. ಅವರಿಗೆ ನಾಳೆ ನೇಮಕಾತಿ ಪತ್ರ ಸಿಗಲಿದೆ.
ಕೇಂದ್ರ ಸರ್ಕಾರದ 38 ಸಚಿವಾಲಯ ಅಥವಾ ಇಲಾಖೆಗಳು ದೇಶಾದ್ಯಂತ ಗ್ರೂಪ್ ಎ, ಗ್ರೂಪ್ ಬಿ, ಗ್ರೂಪ್ ಸಿ ಹುದ್ದೆಗಳಿಗೆ 75,000 ಮಂದಿಯನ್ನು ನೇಮಕ ಮಾಡಿಕೊಂಡಿದೆ.
BIGG NEWS : `ಜೀವಂತ ಪ್ರಮಾಣ ಪತ್ರ’ : ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರಿಗೆ ಮುಖ್ಯ ಮಾಹಿತಿ