ಬೆಂಗಳೂರು : ಕಳೆದ ತಿಂಗಳಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ ಕೆಂಪೇಗೌಡ ಪ್ರತಿಮೆ ಉದ್ಘಾಿಟನೆ , ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಗೆ ಚಾಲನೆ ನೀಡಿದ್ದರು. ಇದೀಗ ಮತ್ತೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
BREAKING NEWS : ‘ಮೈತ್ರಿ ಮೂವಿ ಮೇಕರ್ಸ್’ ಮೇಲೆ ‘IT’ ದಾಳಿ : ಬೆಂಗಳೂರು ಕಚೇರಿ ಸೇರಿ 15 ಕಡೆ ಶೋಧ ಕಾರ್ಯ
ಹೌದು, ಪ್ರಧಾನಿ ನರೇಂದ್ರ ಮೋದಿ ಮತ್ತೆ ಮುಂದಿನ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯದ ಬಿಜೆಪಿ ನಾಯಕರಿಗೆ ಮತ್ತಷ್ಟು ಹುಮ್ಮಸ್ಸು ಬರಲಿದೆ. ಪ್ರಧಾನಿ ಮೋದಿ ವಿವೇಕಾನಂದ ಜಯಂತಿಯಲ್ಲಿ ಭಾಗಿಯಾಗಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಹಾಗೂ ಯುವ ಮೋರ್ಚಾ ಸಮಾವೇಶದಲ್ಲಿ ಮೋದಿ ಭಾಗಿಯಾಗುವ ಸಾಧ್ಯತೆ ಇದೆ. ಹಾಗೆಯೇ ಧಾರವಾಡದಲ್ಲಿ ಐಐಟಿ ಕಟ್ಟಡ ಉದ್ಘಾಟನೆಗೆ ಮೋದಿ ಬರಲಿದ್ದು, ಬಳಿಕ ಉಡುಪಿ ಹಾಗೂ ಧಾರವಾಡಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆ ಬಿಜೆಪಿಯಿಂದ ಸಮಾವೇಶಕ್ಕೆ ಭಾರೀ ಸಿದ್ಧತೆ ನಡೆದಿದೆ.
ಇನ್ನೂ, ಗುಜರಾತ್ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ನಚಿತ್ತ ಕರ್ನಾಟಕದತ್ತ ಹರಿದಿದ್ದು, ಬಿಜೆಪಿ ವರಿಷ್ಟರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ವಿವಿಧ ನಾಯಕರುಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರು ಜ. 2ನೇ ವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಚಿತ್ರದುರ್ಗದಲ್ಲಿ ಜನವರಿ ಮೊದಲ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.