ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರ ಸಂಬಂಧ ಸಂತ್ರಸ್ತ ಬಾಲಕಿಯರು ಹಾಗೂ ಬಾಲಕಿಯರ ಪೋಷಕರು ವಿಚಾರಣೆಗೆ ಹಾಜರಾಗಿದ್ದಾರೆ.
BIGG NEWS : ಮುರುಘಾಮಠದ ಶ್ರೀಗಳ ವಿರುದ್ಧ ಆರೋಪ ಸುಳ್ಳಾಗಲಿ ಎಂದು ಪ್ರಾರ್ಥಿಸುವೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ
ಚಿತ್ರದುರ್ಗದ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಂತ್ರಸ್ತ ಬಾಲಕಿಯರು ಮತ್ತು ಬಾಲಕಿಯರ ಪೋಷಕರ ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಬ್ಬ ಬಾಲಕಿಯ ಪೋಷಕರನ್ನು ಕರೆತರಲು ಅಧಿಕಾರಿಗಳು ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮುರುಘಾ ಶ್ರೀ ಗಳ ಬಂಧನದ ಸಾಧ್ಯತೆ ಹೆಚ್ಚಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸಲಿದ್ದಾರೆ. ಎಸ್.ಕೆ.ಬಸವರಾಜನ್ ವಿರುದ್ಧ ಲೈಂಗಿಕ ದೌರ್ಜನ್ಯವೆಂದು ಮಹಿಳೆ ದೂರ ನೀಡಿದ್ದಾರೆ. ಸ್ವಾಮೀಜಿ ವಿರುದ್ದ ಅತ್ಯಾಚಾರದ ಆರೋಪವೂ ಇರುವುದರಿಂದ ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ.