ಚಿತ್ರದುರ್ಗ : ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿರುವ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ಸೋಮವಾರ ಮುರುಘಾಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ.
ಪೊಲೀಸರು ಇಂದೂ ಬಾಲಕಿಯರನ್ನು ಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದು, ಬಳಿಕ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಧೀಶರ ಮುಂದೆ ಹೇಳಿಕೆ ಕೊಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
BIG NEWS: ಹಬ್ಬದ ಹೊತ್ತಿನಲ್ಲಿ ರಾಜ್ಯದ ಜನತೆಗೆ ಬಿಗ್ ಶಾಕ್: ನಂದಿನಿ ಹಾಲಿನ ಪಾಕೆಟ್ ದರ ಏರಿಕೆಗೆ ಪ್ರಸ್ತಾವನೆ
ಸ್ಥಳ ಮಹಜರು ಇಂದು ಮಧ್ಯಾಹ್ನದವರೆಗೆ ಮುಂದುವರೆಯುವ ಸಾಧ್ಯತೆ ಇದ್ದು, ನಂತರ ಸಿಆರ್ ಪಿಸಿ 164 ಅಡಿ ಹೇಳಿಕೆ ಕೊಡಿಸಲು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ಸೂಚನೆಗಳು ಕಾಣಿಸುತ್ತಿವೆ. ಸಂತ್ರಸ್ತರು ಹೇಳಿಕೆ ನೀಡಿದ ನಂತರವೇ ಶಿವಮೂರ್ತಿ ಮುರುಘಾಶರಣರ ವಿಚಾರಣೆಗೆ ಒಳಪಡಿಸಲಾಗುತ್ತದೆ ಎನ್ನಲಾಗಿದೆ.