ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗಳು ಜೈಲುಪಾಲಾಗಿರುವ ಹಿನ್ನೆಲೆಯಲ್ಲಿ ಮುರುಘಾಮಠ, ವಿದ್ಯಾಪೀಠದ ಕಾರ್ಯವೈಖರಿ ಬಗ್ಗೆ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮುರುಘಾಮಠ, ವಿದ್ಯಾಪೀಠದ ಕಾರ್ಯವೈಖರಿ ಬಗ್ಗೆ ರಾಜ್ಯ ಸರ್ಕಾರವು ನವೆಂಬರ್ 4 ರಂದು ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭುಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿ ಇದೀಗ ವರದಿ ಸಲ್ಲಿಸಿದ್ದಾರೆ.
ಮುರುಘಾಮಠ, ವಿದ್ಯಾಪೀಠದ ದಾಖಲೆಗಳು ಸೇರಿ ಒಟ್ಟು 70 ಪುಟದ ವರದಿ ಸಲ್ಲಿಸಿದ್ದಾರೆ. ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿ ದಿವ್ಯಾ ಪ್ರಭು ವರದಿ ಸಲ್ಲಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
BREAKING NEWS : ಬೆಂಗಳೂರಿನಲ್ಲಿ ತಡರಾತ್ರಿ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ : ಕಾಮುಕ ಅರೆಸ್ಟ್