ಉಡುಪಿ : ವಿದ್ಯುತ್ ದರ ಏರಿಕೆ ಕುರಿತಂತೆ ಇಂಧನ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಲ್ಲಿದ್ದಲು ದರ ಹೊಂದಾಣಿಕೆ ಮಾಡಲು ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
BIGG NEWS : ಕಾಂಗ್ರೆಸ್ ನಿಂದ `ಲಿಂಗಾಯತ ಸಿಎಂ ಟಾರ್ಗೆಟ್’ : ಸಚಿವ ಡಾ.ಕೆ. ಸುಧಾಕರ್ ಗಂಭೀರ ಆರೋಪ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಷಕ್ಕೆ ಒಂದು ಸಲ ವಿದ್ಯುತ್ ದರ ಏರಿಕೆ ಮಾಡಲಾಗುತ್ತದೆ. 9 ವರ್ಷದಿಂದ 3 ತಿಂಗಳಿಗೊಮ್ಮೆ ದರ ನಿಗದಿ ಮಾಡಲಾಗುತ್ತದೆ. ಕಲ್ಲಿದ್ದಲು ಬೆಲೆ ಹೊಂದಾಣಿಕೆಗೊಸ್ಕರ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ), ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ). ಈ ವಿಭಾಗಗಳ ವಿದ್ಯುತ್ ಬೆಲೆ ಹೆಚ್ಚಳಕ್ಕೆ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ.ಅಕ್ಟೋಬರ್ 2022 ರಿಂದ ಮಾರ್ಚ್ 2023 ರವರೆಗೆ ನೂತನ ನಿಯಮ ಜಾರಿಯಲ್ಲಿದೆ ಅಂತ ಆದೇಶದಲ್ಲಿ ತಿಳಿಸಲಾಗಿದೆ.