ಬಳ್ಳಾರಿ : ಕರ್ನಾಟಕ ಸರ್ಕಾರವು 2022 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(PMFBY) ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಇಚ್ಛೆಯುಳ್ಳ ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವುದರ ದಾಖಲೆಗಳಾದ ಪಹಣಿ ಪ್ರತಿ, ಬ್ಯಾಂಕ್ ಖಾತೆ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್ ನ ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರ ಸಲ್ಲಿಸುವುದು.
2022-23 ನೇ ಸಾಲಿನಲ್ಲಿ ಉಲ್ಲೇಖಿತ ಪತ್ರದನ್ವಯ ಸರ್ಕಾರದಿಂದ ಅನುಷ್ಠಾನಗೊಳಿಸುವ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ (PMFBY) ವಿಮಾ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ರೈತರಿಗೆ (ಮುಂಗಾರು ಹಂಗಾಮು-2022) ವಿಮಾ ಮೊತ್ತಕ್ಕೆ ಸಂಬಂಧಿಸಿದಂತೆ ವಿಮಾ ಮೊತ್ತದ ಮಾಹಿತಿಯನ್ನು ಬಳ್ಳಾರಿ ತಾಲ್ಲೂಕು ಬಳ್ಳಾರಿ, ಕುರುಗೋಡು, ಕೋಳೂರು, ಮೋಕಾ, ರೂಪನಗುಡಿ ಹೋಬಳಿ (PMFBY) ವಿಮೆಗೆ ಒಳಪಡುವ ಬೆಳೆಗಳ ನೀರಾವರಿ ಕೆಂಪು ಮೆಣಸಿನಕಾಯಿ ಪ್ರತಿಹೆಕ್ಟರ್ಗೆ ವಿಮಾ ಮೊತ್ತ ರೂ. 97128/, ರೈತರು ಪಾವತಿಸಬೇಕಾದ ವಿಮಾ ಕಂತಿನ ಧರ ಶೇ.5 ರೂ.4856/
ಉಲ್ಲೇಖಿತ ಪತ್ರದಲ್ಲಿ ಸರ್ಕಾರದಿಂದ ಅಧಿಸೂಚನೆ ಹೊರಡಿಸಿದ್ದು, ರೈತರು ವಿಮೆಯನ್ನು ನೊಂದಯಿಸಿಕೊಳ್ಳಲು (PMFBY) ಯೋಜನೆಗೆ ಜು.31 ರಂದು ಕೊನೆಯ ದಿನಾಂಕ ವಾಗಿರುತ್ತದೆ.
ರೈತರು ಹೆಚ್ಚಿನ ಸಂಖ್ಯೆಯಲ್ಲಿ ಅಧಿಸೂಚಿತ ಬೆಳೆಗಳಿಗೆ ವಿಮೆ ನೊಂದಾಯಿಸಿಕೊಂಡು ಯೋಜನೆಯ ಸೌಲಭ್ಯ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ರೈತರು ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ಕಚೇರಿಯ ದೂ.08392-278177 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.