ಬೆಂಗಳೂರು: ಮಹಾತ್ಮಾಗಾಂಧಿ ನರೇಂಗಾ ಯೋಜನೆಯಡಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
WATCH VIDEO: ʻಫಿಫಾ ವಿಶ್ವಕಪ್ʼ ಪಂದ್ಯ ನೋಡುವಾಗ ಪತ್ನಿಗೆ ಮೇಕಪ್ ಮಾಡಿಕೊಳ್ಳಲು ಸಹಾಯ ಮಾಡಿದ ಪತಿ!… ವಿಡಿಯೋ ವೈರಲ್
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಮಹಾತ್ಮಾಗಾಂಧಇ ನರೇಗಾ ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ಇರುತ್ತದೆ ಎಂದಿದ್ದಾರೆ.
BIGG NEWS : ಇಂದು ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ `ಒನಕೆ ಓಬವ್ವ ಜಯಂತಿ’ ಕಾರ್ಯಕ್ರಮ : ಸಿಎಂ ಬೊಮ್ಮಾಯಿ ಉದ್ಘಾಟನೆ
ಇನ್ನೂ ಪ್ರಸ್ತುತ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವು ಶೇ.51ರಷ್ಟು ಇದ್ದು, ಇದನ್ನು ಶೇ.60ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಯೋಜನೆಯ ಕಾಮಗಾರಿಗಳನ್ನು ಹೆಚ್ಚಿನ ಸಂಖ್ಯೆಲ್ಲಿ ಮಹಿಳೆಯರು ಭಾಗವಹಿಸುವಂತೆ ಮಾಡಲು ಈಗಾಗಲೇ ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮಹಾತ್ಮಗಾಂಧಿ ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 6 ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 6 ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶಿಸಿದ್ದಾರೆ.