ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಲಿದ್ದಾರೆ. ಈ ಮೂಲಕ ನಾಡಹಬ್ಬ ದಸರೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಬೆಳಿಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. 10:45ಕ್ಕೆ ಚಾಮುಂಡಿ ಬೆಟ್ಟದಿಂದ ಹೊರಟು, ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುರ್ಮು ಭಾಗವಹಿಸಲಿದ್ದಾರೆ.
ದಸರಾ ಉತ್ಸವ ಉದ್ಘಾಟನೆ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದೆ. ವೇದಿಕೆ ಹಿಂಭಾಗದಲ್ಲಿ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ.ವೇದಿಕೆ ಮೇಲೆ ರಾಷ್ಟ್ರಪತಿ, ರಾಜ್ಯಪಾಲರು, ಸಿಎಂ ಸೇರಿ 13 ಮಂದಿಗೆ ವೇದಿಕೆ ಮೇಲೆ ಕೂರಲು ಅವಕಾಶವಿರುತ್ತದೆ. ಇನ್ನು ದಸರಾ ಉದ್ಘಾಟನೆ ವೀಕ್ಷಣೆಗೆ ಸಾರ್ವಜನಿಕರಿಗೂ ಅವಕಾಶ ಸಿಗಲಿದೆ