ಬೆಂಗಳೂರು : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಗೌರವಾರ್ಥ ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿರುವ ಬೀಳ್ಕೊಡುಗೆ ಔತಣಕೂಟದಲ್ಲಿ ಭಾಗಿಯಾಗಲು ಇಂದು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ.
BIGG NEWS : ಮಂಕಿಪಾಕ್ಸ್ ಕಾಯಿಲೆ : ರಾಜ್ಯ ‘ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ
ಸಿಎಂ ಬವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ನಿಗದಿಯಾಗಿರುವ ಸಂಪುಟ ಸಭೆ ಮುಗಿಸಿಕೊಂಡು ನವದೆಹಲಿಗೆ ತೆರಳಲಿದ್ದಾರೆ. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದು, ಶನಿವಾರ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಜುಲೈ 24 ರಂದು ಮೂರು ದಿನಗಳ ಅಧಿಕೃತ ಭೇಟಿಗಾಗಿ ಮತ್ತೆ ದೆಹಲಿಗೆ ತೆರಳಲಿದ್ದಾರೆ. ಜುಲೈ 24 ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.