ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೆ ಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗಿತ್ತಿರುವುದು ಹಾಗೂ ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಮಾಡದಂತೆ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ-ವಿಡಿಯೋ ಮಾಡದಂತೆ ಆದೇಶಿಸಲಾಗಿದೆ.
