ಮಡಿಕೇರಿ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಕರೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಜನಜಾಗೃತಿ ಸಮಾವೇಶ ಆಯೋಜಿಸಿದ ಬೆನ್ನಲ್ಲೇ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಭ್ರಷ್ಟಾಚಾರ ಆರೋಪ: ಪಂಜಾಬ್ ಕಾಂಗ್ರೆಸ್ ಕಾರ್ಯಾಧ್ಯಕ್ಷ, ಮಾಜಿ ಸಚಿವ ʻಭರತ್ ಭೂಷಣ್ ಆಶುʼ ಅರೆಸ್ಟ್
ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27 ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಸತೀಶ್ ಆದೇಶ ಹೊರಡಿಸಿದ್ದಾರೆ. ಕೋಮು ಸೌಹಾರ್ದತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಸೆಕ್ಷನ್ ಜಾರಿ ಮಾಡಲಾಗಿದ್ದು, ಜೊತೆಗೆ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.
Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
ಮತೀಯವಾಗಿ ಸೂಕ್ಷ್ಮವಾದ ಕೊಡಗು ಜಿಲ್ಲೆಯ್ಲಿ ಯಾವುದೇ ರಾಜಕೀಯ, ಮತೀಯ, ಸಾರ್ವಜನಿಕ ಸಭೆ, ಮೆರವಣಿಗೆ ಪ್ರತಿಭಟನೆಗಳಿಗೆ ಅವಕಾಶ ನೀಡಿದಲ್ಲಿ ಕೋಮು ಗಲಭೆ ಆಗುವ ಸಾಧ್ಯತೆ ಇದೆ. ಆದ್ದರಿಂದ ನಿಷೇಧಾಜ್ಞೆ ಜರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.
BIGG NEWS : ರಾಜ್ಯ ಸರ್ಕಾರದಿಂದ `ಪೌರ ಕಾರ್ಮಿಕರಿಗೆ’ ಗುಡ್ ನ್ಯೂಸ್ : ಶೀಘ್ರವೇ ಕಾಯಂ ಆದೇಶ