ಬೆಂಗಳೂರು : ಪಿಎಸ್ ಐ ನೇಮಕಾತಿ ಪ್ರಕರಣ ಕುರಿತು ವೈರಲ್ ಆಡಿಯೋದಲ್ಲಿ ಮಾತನಾಡಿರುವುದು ನಾನಲ್ಲ. ನಾನು ಯಾವುದೇ ತಪ್ಪ ಮಾಡಿಲ್ಲ ಎಂದು ಬಿಜೆಪಿ ಶಾಸಕ ಬಸವರಾಜ ದಢೇಸಗೂರು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣದ ಕುರಿತು ವೈರಲ್ ಆಡಿಯೋದಲ್ಲಿ ನಾನು ಮಾತನಾಡಿಲ್ಲ. ಆ ಧ್ವನಿ ನನ್ನದಲ್ಲ. ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಆಗುತ್ತಿದೆ. ನಾನು ಯಾವುದೇ ತಪ್ಪ ಮಾಡಿಲ್ಲ. 15 ಲಕ್ಷ ರೂ. ಆರೋಪ ಸುಳ್ಳು ಎಂದು ಹೇಳಿದ್ದಾರೆ.
ಪರಸಪ್ಪ ಮೇಗೂರು ಎಂಬುವರು ತಮ್ಮ ಮಗನಿಗೆ ಪಿಎಸ್ ಐ ಹುದ್ದೆಗಾಗಿ ಶಾಸಕ ಬಸವರಾಜ ದಡೇಸಗೂರು ಅವರಿಗೆ 15 ಲಕ್ಷ ರೂ. ನೀಡಿರುವುದಾಗಿ ಹೇಳಿಕೊಂಡಿದ್ದ ಆಡಿಯೋ ವೈರಲ್ ಆಗಿತ್ತು. ಆಡಿಯೋ ವೈರಲ್ ಬೆನ್ನಲ್ಲೇ ಪರಸಪ್ಪಗೆ ಶಾಸಕರು 15 ಲಕ್ಷ ರೂ. ಹಣ ವಾಪಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.