ಬೆಂಗಳೂರು : ಪೊಲೀಸ್ ಸಬ್ ಇನ್ ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಮತ್ತೊಬ್ಬ ಅಭ್ಯರ್ಥಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 7 ನೇ ಆರೋಪಿಯಾಗಿದ್ದ ಎ.ಪಿ. ಮನೋಜ್ ಬಂಧಿತ ಆರೋಪಿ. ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆ ಸಲುವಾಗಿ 10 ದಿನ ಕಸ್ಟಡಿಗೆ ಪಡೆಯಲಾಗಿದೆ.
ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಮನೋಜ್ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ.