ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್ ನನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ.

Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ಶೀಘ್ರವೇ `BBMP’ಯ 1032 ಹುದ್ದೆಗಳ ಭರ್ತಿ!

ಎಸ್. ಜಾಗೃತ್ ಪಿಎಸ್ ಐ ಪರೀಕ್ಷೆಯಲ್ಲಿ 4 ನೇ ರ್ಯಾಂಕ್ ಬಂದಿದ್ದನ್ನು. ಎಸ್. ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್ ಐಆರ್ ಹಾಕಿರುವುದನ್ನು ರದ್ದುಪಡಿಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಜಾಗೃತ್ ಒಬ್ಬನಾಗಿದ್ದ. ಬಳಿಕ ಪ್ರಕರಣದ ತನಿಖೆ ತೀವ್ರಗೊಂಡ ಬೆನ್ನಲ್ಲೇ ನಾಪತ್ತೆಯಾಗಿದ್ದ.

BIGG NEWS : `KPTCL’ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾಹಿತಿ

ತಾಂತ್ರಿಕ ಮಾಹಿತಿ ಆಧರಿಸಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಸಮೀಪ ಆರೋಪಿ ಜಾಗೃತ್ ನನ್ನು ಸಿಐಡಿ ಬಂಧಿಸಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.

BIGG NEWS : ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘ಸಾರಿಗೆ ನೌಕರ’ರಿಗೆ ಸಿಹಿಸುದ್ದಿ : ‘ಪರಸ್ಪರ ಅಂತರ ನಿಗಮ ವರ್ಗಾವಣೆ’ಗೊಳಿಸಿ KSRTC ಆದೇಶ

Share.
Exit mobile version