ತುಮಕೂರು: ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ( Public Exam ) ನಡೆಸಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಫೇಲ್ ಆಗುವಂತ ಭಯ ಅನೇಕ ವಿದ್ಯಾರ್ಥಿಗಳಲ್ಲಿ ಕಾಡುತ್ತಿತ್ತು. ಆದ್ರೇ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡೋದಿಲ್ಲ ಎಂಬುದಾಗಿ ಶಿಕ್ಷಣ ಸಚಿವರು ಹೇಳಿದ್ದಾರೆ. ಈ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
BIGG NEWS : ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ : ಹೊಸ ಪಕ್ಷ ಘೋಷಣೆ?
ನಗರದಲ್ಲಿ ರುಪ್ಸಾ ಸಂಘಟನೆಯಿಂದ ಹಮ್ಮಿಕೊಂಡಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಅವರು, 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಮೌಲ್ಯ ಮಾಪನ ಉದ್ದೇಶದಿಂದ ಪಬ್ಲಿಕ್ ಪರೀಕ್ಷೆಯಲ್ಲಿ ಮಾಡಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ರಾಜ್ಯದಲ್ಲಿ ಮುಂಬರುವಂತ ದಿನಗಳಲ್ಲಿ ಎನ್ಇಪಿ ( NEP ) ಆಧಾರದ ಮೇಲೆ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ಮೊದಲ ಹಂತದಲ್ಲಿ 500 ರಿಂದ 600 ಶಾಲೆಗಳಲ್ಲಿ ಎನ್ಇಪಿ ಶೈಕ್ಷಣಿಕ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಈ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುತ್ತದೆ ಎಂದರು.