ಬೆಂಗಳೂರು: ಸ್ವಾತಂತ್ರ್ಯದ ಅಮೃತಮಹೋತ್ಸದ ಪ್ರಯುಕ್ತ ಬೆಂಗಳೂರಿನಲ್ಲಿ ಕಾಂಗ್ರೆಸ್ ಅಳವಡಿಸಿದ ಟಿಪ್ಪು ಭಾವಚಿತ್ರ ಇದ್ದ ಫ್ಲೆಕ್ಸ್ ಅನ್ನು ರಾಷ್ಟ್ರ ರಕ್ಷಣಾ ಪಡೆ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಹರಿದು ಹಾಕಿದ್ದು, ಈ ಕೃತ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶಿವಮೊಗ್ಗದ ಮಾಲ್ವೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಅವರ ಭಾವಚಿತ್ರ ಹರಿದು ಹಾಕಿದ್ದಾರೆ.
ಈ ವೇಳೆ ಮಾತನಾಡಿದ ಪುನೀತ್ ಕೆರೆಹಳ್ಳಿ, ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಬಾರಿ ಜೈಲು ಶಿಕ್ಷೆ ಅನುಭವಿಸಿದ ವೀರ ಸಾವರ್ಕರ್ ಬ್ಯಾನರ್ ಹರಿದು ಹಾಕಲಾಗಿದೆ. ಇದರ ಪ್ರತಿಕಾರವಾಗಿ ಇಂದು ಟಿಪ್ಪು ಬ್ಯಾನರ್ ಹರಿದು ಹಾಕಲಾಗಿದೆ. ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಹೈಕೋರ್ಟ್ ಹೇಳಿದೆ. ಹೀಗಾಗಿ ಟಿಪ್ಪು ಬದಲಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರವನ್ನು ಹಾಕಿ ಎಂದು ಹೇಳಿದ್ದಾರೆ.
BIGG NEWS : ರೈತರೇ ಗಮನಿಸಿ : ಪಿ.ಎಂ.ಕಿಸಾನ್ ಯೋಜನೆಯಡಿ ಇ-ಕೆವೈಸಿಗೆ ನಾಳೆಯೇ ಕೊನೆಯ ದಿನ