ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೂ ಸಚಿವ ಸ್ಥಾನ ನೀಡಬೇಕು ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ.
Corona Vaccine: ರಾಜ್ಯದಲ್ಲಿ ‘ಮೊದಲ ಡೋಸ್ ಲಸಿಕೆ’ಯನ್ನು ಶೇ.100ರಷ್ಟು ಗುರಿ ಸಾಧಿಸಲಾಗಿದೆ – ಸಚಿವ ಡಾ.ಕೆ.ಸುಧಾಕರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಲ್ಲಿ ರಮೇಶ್ ಜಾರಕಿಹೊಳಿಗೂ ಸಚಿವ ಸ್ಥಾನ ನೀಡಬೇಕು. ಹೊಸಬರಿಗೆ ಅವಕಾಶ, ಹಳಬರಿಗೆ ಕೊಕ್ ಕೊಡುವ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ಸಚಿವ ಸ್ಥಾನ ನೀಡುವಂತೆ ರಮೇಶ್ ಜಾರಕಿಹೊಳಿ ಅವರ ಒತ್ತಡವೂ ಇದೆ ಎಂದು ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ನಮ್ಮ ಜೊತೆಗೆ ರಾಜೀನಾಮೆ ಕೊಟ್ಟು ಬಂದವರು, ಕಾರಣಾಂತರಗಳಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
BIGG NEWS : ಎಲ್ಲರೂ ಒಮಿಕ್ರಾನ್ ಸೋಂಕಿಗೆ ಒಳಗಾಗುತ್ತಾರೆಯೇ? ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತಾ?