ಕೊಪ್ಪಳ: ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ನಿಯಮ 35 ರಡಿ ಟ್ಯೂಷನ್ ತರಬೇತಿ ಕೇಂದ್ರ ಹಾಗೂ ವಸತಿ ಮನೆ ಪಾಠಗಳ ಕೇಂದ್ರಗಳ ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಗಂಗಾವತಿ ತಾಲ್ಲೂಕಿನಲ್ಲಿ ಯಾವುದಾದರೂ ಟ್ಯೂಷನ್ ತರಬೇತಿ ಕೇಂದ್ರ ಹಾಗೂ ವಸತಿ ಮನೆ ಪಾಠಗಳ ಕೇಂದ್ರಗಳು ಅನಧಿಕೃತವಾಗಿ ನಡೆಯುತ್ತಿದ್ದಲ್ಲಿ, ಇಲಾಖೆಯಲ್ಲಿ ನೋಂದಣಿ ಮಾಡುವ ಸಲುವಾಗಿ ಪ್ರಸ್ತಾವನೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ನೋಂದಣಿ ಪ್ರಾಧಿಕಾರಿಗಳಾದ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಪ್ಪಳ ಇವರಿಗೆ ಸಲ್ಲಿಸಬೇಕು. ತಪ್ಪಿದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.