ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬಡವರಿಗೆ ರಾಜ್ಯದಲ್ಲೂ ಮೀಸಲಾತಿ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ವರ್ಗದ ಬಡವರಿಗೆ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ತಕ್ಷಣವೇ ಕಟ್ಟುನಿಟ್ಟಾಗಿ ಜಾರಿಗೆ ತರುವ ಕೆಲಸ ಮಾಡಲಾಗುವುದು. ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸಿ ಸಂವಿಧಾನಕ್ಕೆ ಮಾಡಲಾದ 103 ನೇ ತಿದ್ದುಪಡಿಯು ಸಂವಿಧಾನ ಬದ್ಧ ಎಂದು ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹ ಎಂದು ಹೇಳಿದ್ದಾರೆ.
BREAKING NEWS: ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ | Earthquake
ಈಗಾಗಲೇ ರಾಜ್ಯದಲ್ಲೂ ಈ ಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಮುಂದಿನ ಎಲ್ಲ ನೇಮಕಾತಿಗಳಲ್ಲೂ ಈ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.