ಬೆಂಗಳೂರು : ಮೊದಲೆಲ್ಲ ರೌಡಿ ಶೀಟರ್ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು, ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಮೊದಲೆಲ್ಲ ರೌಡಿ ಶೀಟರ್ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು, ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ. ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ? ಎಂದು ಪ್ರಶ್ನಿಸಿದೆ.
ಮೊದಲೆಲ್ಲ ರೌಡಿ ಶೀಟರ್ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು
ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ!ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ?
— Karnataka Congress (@INCKarnataka) December 1, 2022
ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ನಿನ್ನೆ ರಾತ್ರಿ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ ಎಂದು ಹೇಳಿದೆ.
ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು?
ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ನಿನ್ನೆ ರಾತ್ರಿ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ?
ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ @BJP4Karnataka?
— Karnataka Congress (@INCKarnataka) December 1, 2022