ಬೆಂಗಳೂರು : ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 21 ಜಿಲ್ಲೆಗಳಿಗೆ ರಾಜ್ಯ ಸರ್ಕಾರವು 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
2022-23 ನೇ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಆಗಿ ಮಾನವ ಜೀವ ಹಾನಿ, ಜಾನುವಾರ ಜೀವ ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ಸಾರ್ವಜನಿಕ ಮೂಲ ಸೌಕರ್ಯ ಹಾನಿಯಾಗಿರುವುದರಿಂದ ರಾಜ್ಯದ 21 ಜಿಲ್ಲೆಗಳಿಗೆ 200 ಕೋಟಿ ರೂ. ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.