ಬೆಂಗಳೂರು : ರಾಜ್ಯ ಸರ್ಕಾರವು ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ ಮಾಲೀಕರಿಗೆ ಪರಿಹಾರಧನ ನೀಡುವ ಸಂಬಂಧ 30 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚರ್ಮಗಂಟು ರೋಗ ಪ್ರಾರಂಭವಾದಾಗ ಈ ಹಿಂದೆ 2 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ರೋಗವನ್ನು ಹತೋಟಿಗೆ ತರಲಾಗುತ್ತಿದ್ದರೂ 17 ಸಾವಿರ ಜಾನುವಾರುಗಳು ಮೃತಪಟ್ಟಿವೆ. ಹೀಗಾಗಿ ಜಾನುವಾರು ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ 30 ಕೋಟಿ ರೂ. ಪರಿಹಾರ ಧನ ನೀಡಿದ್ದಾರೆ ಎಂದರು.
ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.