ಬೆಂಗಳೂರು : ಕಿತ್ತೂರು ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಹಾಗೂ ಇದೇ ವರ್ಷ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BREAKING NEWS : ಸೋನಿಯಾಗಾಂಧಿ ಕರ್ನಾಟಕಕ್ಕೆ ಭೇಟಿ ನೀಡುವುದು ಪಕ್ಕಾ : ಡಿ.ಕೆ.ಶಿವಕುಮಾರ್ ಹೇಳಿಕೆ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ವಿಜಯಜ್ಯೋತಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಕಿತ್ತೂರು ಉತ್ಸವ ಪ್ರಾರಂಭವಾಗಿ 25-30 ವರ್ಷ ಆಯ್ತು, ನಮ್ಮ ಸರ್ಕಾರ ರಾಜ್ಯ ಮಟ್ಟದ ಕಿತ್ತೂರು ಉತ್ಸವ ಮಾಡುತ್ತಿದೆ. ಕಿತ್ತೂರು ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಕೊಟ್ಟಿದ್ದೇವೆ ಎಂದರು.
ಸುವರ್ಣಸೌಧದಲ್ಲಿ ಇದೇ ವರ್ಷ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುತ್ತೇವೆ. ರಾಣಿ ಚೆನ್ನಮ್ಮ ಕಾಲದ ಕುರುಹುಗಳ ಅಭಿವೃದ್ಧಿಪಡಿಸುತ್ತೇವೆ. ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಪ್ರಾರಂಭ ಮಾಡಿದ್ದೇವೆ. ಮುಂದಿನ ತಿಂಗಳು ಸೈನಿಕ ಶಾಲೆ ಉದ್ಘಾಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.