ಬೀದರ್ : ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ನಲ್ಲಿ ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡಲಿದ್ದೇನೆ, ನಾವು ಅಧಿಕಾರಕ್ಕೆ ಬಂದ ಮೇಲೆ ಗರಿಷ್ಟ 3 ಸಾವಿರ ಕೋಟಿ ನೀಡಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಆಡಳಿತ ನಡೆಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಕ್ಕಿಳಿಸಿ ಬಿಜೆಪಿಯನ್ನು ಆಯ್ಕೆ ಮಾಡಿದ್ದೀರಿ. ಕಾಂಗ್ರೆಸ್ ಏನು ಮಾಡಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಭ್ರಷ್ಟಾಚಾರದ ದಾಖಲೆಗಳನ್ನು ರಾಹುಲ್ ಗಾಂಧಿಗೆ ರವಾನಿಸುತ್ತೇನೆ ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸವಾಲ್ ಹಾಕಿದ್ದಾರೆ.
.ಕಾಂಗ್ರೆಸ್ ಭ್ರಷ್ಟಾಚಾರದ ದಾಖಲೆಗಳನ್ನು ರಾಹುಲ್ ಗಾಂಧಿಗೆ ರವಾನಿಸುತ್ತೇನೆ. ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸವಾಲ್ ಹಾಕಿದ್ದಾರೆ.
ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ಅನುದಾನ ನೀಡಿದ್ದು, ಕಾಮಗಾರಿ ಆರಂಭವಾಗುತ್ತಿದೆ. ಮುಂದಿನ ಬಜೆಟ್ನಲ್ಲಿ 5 ಸಾವಿರ ಕೋಟಿ ನೀಡಲಿದ್ದೇವೆ. 3 ವರ್ಷಗಳಿಂದ ಬಿಜೆಪಿ ಜನಪರ ಆಡಳಿತ ಮತ್ತು ಹತ್ತು ಹಲವಾರು ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಿದ್ದು, ಉಚಿತ ಪಡಿತರ ವಿತರಣೆ ಮಾಡಿದ್ದಲ್ಲದೆ ಕೋವಿಡ್ ನಡುವೆಯೂ ದೇಶ ಸರ್ವತೋಮುಖ ಅಭಿವೃದ್ಧಿ ಸಾಧಿಸಿದ್ದೇವೆ ಎಂದರು.