ರಾಯಚೂರು : ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
BIGG NEWS : ರಾಜ್ಯದಲ್ಲಿ ‘SSLC-PUC’ ಪರೀಕ್ಷಾ ಮಂಡಳಿಗಳ ವಿಲೀನ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ರಾಯಚೂರು ಜಿಲ್ಲೆಯ ಗಿಲ್ಲೇಸುಗೂರಿನಲ್ಲಿ ನಡೆದ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ 371 ಜೆ ಬಂದಾಗ ಕಲ್ಯಾಣ ಕರ್ನಾಟಕದ ಕುರಿತು ಜನರು ಕನಸು ಕಂಡರು, ಆದರೆ ಕಾಂಗ್ರೆಸ್ ಅನುದಾನ ಕೊಡಲಿಲ್ಲ. ನಾವು ಅಧಿಕಾರಕ್ಕೆ ಬಂದ ಮೇಲೆ ಗರಿಷ್ಟ 3 ಸಾವಿರ ಕೋಟಿ ನೀಡಿದ್ದೇವೆ. ರಾಯಚೂರು ವಿವಿ ಸೇರಿ ಹಲವು ಅಭಿವೃದ್ದಿ ಕಾರ್ಯಗಳಿಗೆ ಪ್ರತಿಯೊಂದು ಕ್ಷೇತ್ರಕ್ಕೆ ಅನುದಾನ ನೀಡಲಾಗಿದೆ ಎಂದರು.
ಕರ್ನಾಟಕದ ಇತಿಹಾಸದಲ್ಲಿ ಎಸ್.ಸಿ/ ಎಸ್.ಟಿ ಮೀಸಲಾತಿಯನ್ನು ಹೆಚ್ಚಿಗೆ ಮಾಡುವ ಕೆಲಸವನ್ನು ಯಾವ ಸರ್ಕಾರ ಕೂಡ ಕೈಗೊಂಡಿರಲಿಲ್ಲ. ನಮ್ಮ ಸರ್ಕಾರ ಐತಿಹಾಸಿಕ ತೀರ್ಮಾನವನ್ನು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಯಚೂರು ತಾಲ್ಲೂಕಿನ ಗಿಲ್ಲೆಸಗೂರು ಗ್ರಾಮದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ 50 ವರ್ಷಗಳಿಂದ ಮೀಸಲಾತಿ ಹೆಚ್ವಿಸಲು ಬೇಡಿಕೆ ಇತ್ತು. ಕಾಂಗ್ರೆಸ್ ಅಧಿಕಾರವಿದ್ದಾಗ ಏನೂ ಮಾಡಲಿಲ್ಲ. ನಾನು ಎಲ್ಲಾ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಈ ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ಈಗ ಅವರಿಗೆ ಭಯ ಹುಟ್ಟಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಈ ದಿಟ್ಟ ಕ್ರಮ ತೆಗೆದುಕೊಂಡಿರುವುದರಿಂದ ಅವರ ಮತ ಬಿಜೆಪಿ ಗೆ ಹೋಗುತ್ತದೆ ಎಂದು ಭಯಗೊಂಡು ಈ ರೀತಿ ಮಾತನಾಡುತ್ತಿದ್ದಾರೆ ಎಂದರು.
ಯಾರೂ ಅಪಸ್ವರ ಎತ್ತಬಾರದು
ಎಸ್.ಸಿ/ಎಸ್.ಟಿ ಸಮುದಾಯಕ್ಕೆ ತೆಗೆದುಕೊಂಡಿರುವ ಈ ಕ್ರಮದಲ್ಲಿ ಯಾರೂ ಕೂಡ ಅಪಸ್ವರದ ಮಾತುಗಳನ್ನು ಆಡಬಾರದು. ಕಳೆದ 50-60 ವರ್ಷ ಆ ಜನಾಂಗ ನೊಂದಿದೆ. ಅವರಿಗೆ ಅಧಿಕಾರ, ನ್ಯಾಯ ಸಿಕ್ಕಿಲ್ಲ. ಇಂಥ ಸಂದರ್ಭದಲ್ಲಿ ಈ ಪ್ರಕ್ರಿಯೆ ಪ್ರಾರಂಭವಾಗಿದೆ. ಅದಕ್ಕಾಗಿ ಯಾರೂ ಕೂಡ ಅಪಸ್ವರ ಎತ್ತಬಾರದು. ಯಾರು ಅಪಸ್ವರ ಎತ್ತುತ್ತಾರೋ ಅವರು ಎಸ್.ಸಿ. ಎಸ್..ಟಿ ವಿರೋಧಿಗಳು ಎಂದರು.