ಬೆಂಗಳೂರು : ರಾಜ್ಯದ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ 992.16 ಕೋಟಿ ರೂ. ಅನುದಾನಕ್ಕೆ ಶಿಕ್ಷಣ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
BIGG BREAKING NEWS : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : 5 ಜನ ಸ್ಥಳದಲ್ಲೇ ಸಾವು, ಮೂವರು ಗಂಭೀರ
2022-23 ನೇ ಸಾಲಿನ ಅಂಕಿ-ಅಂಶಗಳ ಪ್ರಕಾರ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣದ ಅವಶ್ಯಕತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 992.16 ಕೋಟಿ ರೂ. ವೆಚ್ಚದಲ್ಲಿ ಕೊಠಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.
BIGG NEWS : ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಗೋವು ದತ್ತು ಪಡೆಯಲು `ಪುಣ್ಯ ಕೋಟಿ ಯೋಜನೆ’ ಜಾರಿ
ಕಾಮಗಾರಿ ಸಮಯದಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾಮಗಾರಿ ಪ್ರಾರಂಭಕ್ಕೂ ಮುನ್ನ, ವಿವಿಧ ಹಂತದ ಫೋಟೋಗಳನ್ನು ಇಲಾಖೆಯ ಸ್ಯಾಟ್ಸ್ ತಂತ್ರಂಶದಲ್ಲಿ ಹಂತ ಹಂತವಾಗಿ ಅಪ್ ಲೋಡ್ ಮಾಡಬೇಕು ಎಂದು ಸೂಚಿಸಲಾಗಿದೆ.