ಬೆಂಗಳೂರು : ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ ಕುರಿತಂತೆ ಗೃಹ ಸಚಿವ ಅರಗಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಮಕ್ಕಳ ಕಳ್ಳರ ವದಂತಿ ಬಗ್ಗೆ ಯಾರೂ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.
Video: ಕೋಲ್ಕತ್ತಾದಲ್ಲಿ ಪೊಲೀಸ್ ವ್ಯಾನ್ಗೆ ಬೆಂಕಿ ಹಚ್ಚಿ ದುಷ್ಕೃತ್ಯ: ಹೀಗೆ ಮಾಡಿದ್ದು ನಾವಲ್ಲ ಎಂದ ಬಿಜೆಪಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಕಳ್ಳರ ವದಂತಿ ಕುರಿತಂತೆ ಯಾರೋ ಸುದ್ದಿ ಹಬ್ಬಿಸಿದ್ದಾರೆಂದು ಹಲ್ಲೆ ಮಾಡೋದು ಬೇಡ. ಏನೇ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿ. ಪೊಲೀಸರು ಕಾನೂನು ಕ್ರಮ ಕೈಗೊಳ್ಳಿದ್ದಾರೆ. ಎಲ್ಲೆಲ್ಲಿ ಘಟನೆ ಆಗಿದೆ ಎಂದು ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆ ಮಾಡ್ತೇನೆ ಎಂದು ಹೇಳಿದ್ದಾರೆ.
BIGG NEWS : ಪೋಷಕರೇ ಎಚ್ಚರ..! ಚಾಕೋಲೇಟ್ ಕೇಕ್ ಎಂದು ʻ ಇಲಿ ಪಾಶಾಣ ʼ ತಿಂದ ಬಾಲಕಿ ದುರ್ಮರಣ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಕ್ಕಳು ಕಳ್ಳರು ಬಂದಿದ್ದಾರೆ ಅಂತಾ ವದಂತಿ ಹರಿದಾಡುತ್ತಿದೆ. ಮಕ್ಕಳನ್ನ ಕದ್ದು ಅವರ ದೇಹದ ಭಾಗಗಳನ್ನ ತೆಗೆದು ಮಾರಾಟ ಮಾಡ್ತಿದ್ದಾರೆ ಅನ್ನೋ ವದಂತಿ ಹಬ್ಬುತ್ತಿವೆ ಈ ಹಿನ್ನೆಲೆಯಲ್ಲಿ ಗೃಹ ಸಚಿವರು ವದಂತಿಗೆ ಕಿವಿಗೊಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.