ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, 2ನೇ ದಿನದ ಅಧಿವೇಶನದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಹಾಗೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿ ಒಟ್ಟು 4 ಮಸೂದೆ ಮಂಡನೆಯಾಗಲಿವೆ.
ರಾಜ್ಯ ಸರ್ಕಾರವು ಇಂದು ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡನೆಗೆ ಮುಂದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇ 6ರಷ್ಟು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಈ ಹಿಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿತ್ತು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಆಯೋಗ ಮತ್ತು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ನೇತೃತ್ವದ ಸಮಿತಿಯು ಸಲ್ಲಿಸಿರುವ ವರದಿಯ ಶಿಫಾರಸು ಆಧರಿಸಿ ಪರಿಶಿಷ್ಟ ಜಾತಿಯ ಮೀಸಲಾತಿ ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲು ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.