ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಲಿದ್ದು, ಮುನ್ನೆಚ್ಚರಿಕ ಕ್ರಮವಾಗಿ ಇಂದು ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿದೆ.
‘ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಗಳಿದ್ದಾರೆ ಎಂದು ಮೊದಲು ಲೆಕ್ಕ ಹಾಕಲಿ’ : ಸಿಎಂ ಬೊಮ್ಮಾಯಿ ತಿರುಗೇಟು
ಸಭೆ ಬಳಿಕ ಮಾತನಾಡಿದ ಅಲೋಕ್ ಕುಮಾರ್, ಸುಪ್ರೀಂಕೋರ್ಟ್ ನಲ್ಲಿ ನಾಳೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬಗ್ಗೆ ತೀರ್ಪು ಪ್ರಕಟಿಸಿದರೂ ಏನೂ ಗಲಾಟೆ ಆಗಬಾರದು. ಹೀಗಾಗಿ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ಪೊಲೀಸರು ಮೂರು ಕಡೆ ಜಂಟಿ ಚೆಕ್ಪೋಸ್ಟ್ ಮಾಡಿದ್ದಾರೆ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ತಿಳಿಸಿದರು.
ಬೆಂಗಳೂರಿಗರೇ ಗಮನಿಸಿ : ನಾಳೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut
ಸಭೆಯಲ್ಲಿ ಉತ್ತರ ವಲಯ ಐಜಿಪಿ, ಬೆಳಗಾವಿ ಎಸ್ಪಿ, ನಗರ ಪೊಲೀಸ್ ಆಯುಕ್ತ, ಡಿಸಿಪಿಗಳು, ಡಿವೈಎಸ್ಪಿಗಳು ಭಾಗವಹಿಸಿದ್ದರು. ಮಹಾರಾಷ್ಟ್ರದ ಕೊಲ್ಹಾಪುರ ಐಜಿಪಿ, ಕೊಲ್ಹಾಪುರ ಎಸ್ಪಿ, ಸಾಂಗ್ಲಿ ಎಸ್ಪಿ, ಸಿಂಧುದುರ್ಗ ಎಸ್ಪಿ, ಸಾವಂತವಾಡಿಯ ಡಿಎಸ್ಪಿಗಳು ಭಾಗವಹಿಸಿದ್ದರು.
ʻನಿಧಾನಗತಿಯ ಆರ್ಥಿಕ ಬೆಳವಣಿಗೆಯು ಭಾರತಕ್ಕೆ ತುಂಬಾ ಒಳ್ಳೆಯದುʼ: ಅರ್ಥಶಾಸ್ತ್ರಜ್ಞರ ಅಭಿಪ್ರಾಯ