ಬೆಂಗಳೂರು : ನಗರದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಡಿಸಿ ಕೆ.ಶ್ರೀನಿವಾಸ್ ಅವರು ಇಂದು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ. ಅಂದ ಹಾಗೇ ಮಳೆಯಿಂದ ರಜೆ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು ರಜೆ ಘೋಷಣೆ ಮಾಡಲಾಗಿದೆ ಅಂತ ತಿಳಿದು ಬಂದಿದೆ.
BIG NEWS: ಹಬ್ಬದ ಹೊತ್ತಿನಲ್ಲಿ ರಾಜ್ಯದ ಜನತೆಗೆ ಬಿಗ್ ಶಾಕ್: ನಂದಿನಿ ಹಾಲಿನ ಪಾಕೆಟ್ ದರ ಏರಿಕೆಗೆ ಪ್ರಸ್ತಾವನೆ
ಬೆಂಗಳೂರು ನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದೂ ನಗರದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ.
ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ವರುಣಾ ದೊಡ್ಡ ಪ್ರಮಾಣದಲ್ಲಿ ಶಾಕ್ ನಿಡಿದ್ದು, ಹಬ್ಬದತ್ತ ಊರಿಗೆ ತೆರಳದೇ ಮನೆಲ್ಲೇ ಉಳಿಯುವ ಸನ್ನಿವೇಶ ನಿರ್ಮಾಣವಾಗಿದೆ.ಇಂದಿನಿಂದ ಮೂರು ದಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ; ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು; ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ನಿಮ್ಮ ‘ಮೆಮೊರಿ ಪವರ್’ ಹೆಚ್ಚಾಗ್ಬೇಕಾ.? ಈ ‘7 ಟಿಪ್ಸ್’ ಫಾಲೋ ಮಾಡಿ.! ‘ಮರೆವು’ ಹತ್ರನೂ ಸುಳಿಯೋಲ್ಲ.!