ಬೆಳಗಾವಿ ; 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ.
BIGG BREAKING NEWS : ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಆರೋಗ್ಯದಲ್ಲಿ ಏರುಪೇರು | Heera Ben
ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
BIGG NEWS : ರಾಜ್ಯದಲ್ಲಿ ಈ ವರ್ಷವೇ `2500 ಪೊಲೀಸ್ ವಸತಿ ಗೃಹಗಳ’ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ
ಇಂದು ವಿಧಾನಸಭೆಯಲ್ಲಿ ಆರ್.ವಿ. ದೇಶಪಾಂಡೆಗೆ 2022 ನೇ ಸಾಲಿನ ಅತ್ಯುತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾಗಿರುವ ಆರ್.ವಿ. ದೇಶಪಾಂಡೆಗೆ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಳೆದ ವರ್ಷದಿಂದ ಆರಂಭಗೊಂಡಿದ್ದು, ಮೊದಲ ಪ್ರಶಸ್ತಿಯನ್ನು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪಗೆ ನೀಡಲಾಗಿತ್ತು.